ಯಲ್ಲಾಪುರ: ಭಾರತದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮದಿನಾಚರಣೆ ಪ್ರಯುಕ್ತವಾಗಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಗದರ್ಶನದಂತೆ ಸೆ.17 ಶುಕ್ರವಾರ ಜಿಲ್ಲೆಯಲ್ಲಿ ಕೊರೊನಾ ಲಸಿಕಾ ಮಹಾಮೇಳ ನಡೆಯಲಿದ್ದು, 1ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಈ ಲಸಿಕಾಭಿಯಾನದ ಪ್ರಯೋಜನ ಪಡೆದುಕೊಳ್ಳಿರಿ, ಹಾಗೂ ಈಗಾಗಲೇ ಪ್ರಥಮ ಡೋಸ್ ಪಡೆದು 84 ದಿನ ಪೂರೈಸಿರುವವರು ಮುಂಚಿತವಾಗಿ 2 ಡೋಸ್ ಪಡೆದುಕೊಳ್ಳಿರಿ ಎಂದು ಹೇಳಿದರು. ಜಿಲ್ಲೆಯ 366 ಆಸ್ಪತ್ರೆ ಹಾಗೂ ಸಬ್ ಸೆಂಟರ್’ಗಳಲ್ಲಿ ಲಸಿಕೆ ನೀಡಲು ಸೂಚನೆ ನೀಡಿದ್ದೇವೆ. ಈ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಆಶಾ ಕಾರ್ಯಕರ್ತೆಯರು, ನರ್ಸ್, ವೈದ್ಯರ ಶ್ರಮಕ್ಕೆ ಸಾರ್ವಜನಿಕರು ಸಹಕರಿಸಿ ಎಂದು ಸಚಿವ ಹೆಬ್ಬಾರ್ ಹೇಳಿದರು.