ಕಾರವಾರ: ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಕುಮಟಾ ತಾಲೂಕಿನ ಮಿರ್ಜಾನ್, ದೀವಗಿ, ಅಳಕೊಡ್ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಾಥಾ ವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ನ ಜನಪ್ರತಿಧಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.