ಯಲ್ಲಾಪುರ: ತಾಲೂಕಿನ ಕುಂದರಗಿ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕದಂಬ ಫೌಂಡೇಶನ್ ಶಿರಸಿ, ಜನಸೇವಾ ಟ್ರಸ್ಟ್ ಕುಂದರಗಿ ವತಿಯಿಂದ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ಇತ್ತೀಚೆಗೆ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನೆರವೇರಿತು.
ಶಿಬಿರದಲ್ಲಿ 150ಕ್ಕೂ ಹೆಚ್ಚು ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡರು.