ಬೆಂಗಳೂರು: ವಿಧಾನಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಹಾಲಪ್ಪ ಆಚಾರ ಅವರ ಅಧ್ಯಕ್ಷತೆಯಲ್ಲಿ ಇಂದು ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಮರಳು ನೀತಿಯನ್ನು ಜಾರಿಗೆ ತರುವ ಸಂಬಂಧ ನಡೆದ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಭಾಗವಹಿಸಿದ್ದರು.
ಈ ವೇಳೆ ಶಿವರಾಮ ಹೆಬ್ಬಾರ್ ಅವರು ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮರಳಿನ ಅಭಾವದಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಗಣಿ ಸಚಿವರಿಗೆ ವಿಸ್ತೃತವಾಗಿ ವಿವರಿಸಿದರು ಹಾಗೂ ಸರಕಾರ ರೂಪಿಸುವ ನೂತನ ಮರಳು ನೀತಿಯಲ್ಲಿ ಸಾರ್ವಜನಿಕರಿಗೆ ಅನೂಕುಲವಾಗುವ ರೀತಿಯಲ್ಲಿ ನಿಯಮಗಳನ್ನು ಶೀಘ್ರವಾಗಿ ರೂಪಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ದಿನಕರ ಕೆ ಶೆಟ್ಟಿ, ಸುನೀಲ್ ನಾಯ್ಕ , ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಎಸ್. ಎಲ್. ಘೋಟ್ನೇಕರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ವಿಧಾನಪರಿಷತ ಸದಸ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.