ಹಳಿಯಾಳ : ತಾಲೂಕು ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಲಕ್ಷ್ಮಣ ರೇಡೇಕರ್ ಅವರನ್ನು ನೇಮಕ ಮಾಡಲಾಗಿದೆ.
ಶಾಸಕರಾದ ಆರ್.ವಿ.ದೇಶಪಾಂಡೆ ಶಿಫಾರಸ್ಸಿನಂತೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಅನುಮೋದನೆಯ ಮೇರೆಗೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷರಾದ ರಾಜೇಸಾಬ ಕೆಸನೂರ ಲಕ್ಷ್ಮಣ ರೇಡೇಕರ್ ಅವರನ್ನು ತಾಲೂಕು ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ಲಕ್ಷ್ಮಣ ರೇಡೇಕರ್ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.