ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 63 ಮೇಲೆ ಅರಬೈಲ್ ಘಟ್ಟದಲ್ಲಿ ಪೊಲ್ಸ್ ತುಂಬಿದ ಲಾರಿ ಪಲ್ಟಿ ಬಿದ್ದು, ಸ್ವಲ್ಪ ಗಂಟೆಗಳ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.
ಪೊಲ್ಸ್ ತುಂಬಿಕೊಂಡು ಹೊರಟ್ಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಬಿದ್ದಿದ್ದು, ಚಾಲಕ ನಿರ್ವಾಹಕ ಸಣ್ಣಪುಟ್ಟ ಗಾಯ ಹೊರತು ಪಡಿಸಿ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿ ಹಾಗೂ ಗಟಾರದಲ್ಲಿ ಪೋಲ್ಸ್ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಿಂದ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಪೊಲೀಸರು ಪ್ರಕರಣ ಪರಿಶೀಲಿಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.