ಮುಂಡಗೋಡ: ತಾಲೂಕಿನಲ್ಲಿ ಆರೋಗ್ಯ ಇಲಾಖೆಯಿಂದ ಹೊಸದಾಗಿ “ಆಶಾ ಕಿರಣ” ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮದ ಉದ್ದೇಶ 40 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ತೊಂದರೆ ಗುರುತಿಸಿ ಚಿಕಿತ್ಸೆ ನೀಡುವುದಾಗಿದೆ. ಆಶಾ ಕಾರ್ಯಕರ್ತೆಯರು ಪ್ರಾಥಮಿಕವಾಗಿ ಮನೆ ಮನೆ ಸಮೀಕ್ಷೆ ಮಾಡಿ ಕಣ್ಣಿನ ತೊಂದರೆಯಿರುವವರನ್ನು ಗುರುತಿಸಿ, ಅವರನ್ನು ದ್ವಿತೀಯ ಹಂತದ ಕಣ್ಣಿನ ತಪಾಸಣೆಗಾಗಿ ನೇತ್ರಾಧಿಕಾರಿಗಳನ್ನು ನಿಯೋಜಿಸಲಾಗಿದೆ.
ಅರಶಿಣಗೇರಿ. ಹುನಗುಂದ, ಕಾತೂರು ಮತ್ತು ಮಳಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಫೆ.8ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಫೆ.17 ರವರೆಗೆ ಬೆಳಿಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ ಕಣ್ಣಿನ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮದ ಉಪಯೋಗ ಪಡೆಯುವಂತೆ ಕೋರಲಾಗಿದೆ.