ಕಾರವಾರ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ವಿಡಿಯೋ ಚಿತ್ರೀಕರಣ ಹಾಗೂ ಪೋಟೋಗ್ರಾಫಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಸಕ್ತ ಪುರುಷ/ ಮಹಿಳೆಯರು ಫೆ.13 ರೊಳಗಾಗಿ ತಮ್ಮ ಹೆಸರು, ಜಾತಿ ಪ್ರಮಾಣಪತ್ರ ಹಾಗೂ ಆಧಾರ ಕಾರ್ಡ್ ದಾಖಲೆಗಳನ್ನು ಸಂಬಂಧಪಟ್ಟ ತಾಲೂಕು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಉಚಿತ ವಿಡಿಯೋ ಕ್ಯಾಮರಾ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಚಿತ ವಿಡಿಯೋ ಚಿತ್ರೀಕರಣ, ಪೋಟೋಗ್ರಾಫಿ ತರಬೇತಿ
