ಕಾರವಾರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಫೆ. 10 ರಂದು ಮಾದರ ದೊಳ್ಳಯ್ಯ ಡೋಹರ ಕಕ್ಕಯ್ಯ, ಮಾದರ ಚೆನ್ನಯ್ಯ, ಸಮಗಾರ ಹರಳ್ಳಯ್ಯ, ಉರಿಲಿಂಗ ಪೆದ್ದಿ ಸಮುದಾಯದ ಕಾಯಕ ಶರಣರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಮೆರವಣಿಗೆ ಹೊರಡಲಿದ್ದು, ಜಿಲ್ಲೆಯ ಸಮುದಾಯದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.10ಕ್ಕೆ ಕಾಯಕ ಶರಣರ ಜಯಂತಿ
