ಕಾರವಾರ: ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕಾ ಮಟ್ಟದ ವಿವಿಧ ಇಲಾಖೆಯ ಭಾಗಿದಾರರಿಗೆ ಮತ್ತು ಕಾವಲು ಸಮಿತಿ ಸದಸ್ಯರಿಗೆ ಒಂದು ದಿನದ ತರಬೇತಿ ಕಾರ್ಯಗಾರವು ಫೆಬ್ರವರಿ 13 ರಂದು ಬೆಳಗ್ಗೆ 10 ಗಂಟೆಗೆ ಕಾರವಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ, ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾರಾಯ್ಕರ್ ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಡಾ.ಹೆಚ್.ಹೆಚ್. ಕುಕನೂರು ಅಧ್ಯಕ್ಷತೆ ವಹಿಸಲಿದ್ದಾರೆ.