Slide
Slide
Slide
previous arrow
next arrow

ಪಿಡಿಒ ಆಫ್ ದಿ ಮಂತ್ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಉದಯ ಬೋರಕರ್

300x250 AD

ಕಾರವಾರ:- ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಜನವರಿ ತಿಂಗಳ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಭಾಜನರಾದ ಭಟ್ಕಳ ತಾಲ್ಲೂಕು ಪಂಚಾಯತ್‌ನ ಪ್ರಭಾರ ಸಹಾಯಕ ನಿರ್ದೇಶಕರು ಹಾಗೂ ಬೇಂಗ್ರೆ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಉದಯ ದುರ್ಗಪ್ಪ ಬೋರಕರ್‌ಗೆ ಜಿಲ್ಲಾ ಪಂಚಾಯತ್‌ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಸೋಮವಾರ ಕಚೇರಿಯಲ್ಲಿ ಪ್ರಮಾಣ ಪತ್ರ ವಿತರಿಸಿ ಅಭಿನಂದಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಉದಯ ದುರ್ಗಪ್ಪ ಬೋರಕರ್, ಗ್ರಾಮ ಮಟ್ಟದಲ್ಲಿ ಸಮಸ್ಯೆಗಳ ನಿವಾರಣೆ ಹಾಗೂ ಜನರ ಜೀವನ ಸುಧಾರಣೆಗಾಗಿ ನಿರಂತರ ಶ್ರಮಿಸುವ ಪಿಡಿಒಗಳ ಕಾರ್ಯವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮೇಲಾಧಿಕಾರಿಗಳು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದು ಅತ್ಯಂತ ಖುಷಿಯ ಜೊತೆಗೆ ಪ್ರಶಂಸನೀಯ ಸಂಗತಿಯಾಗಿದೆ. ಈ ತರಹದ ಪುರಸ್ಕಾರಗಳಿಂದ ಗ್ರಾಮೀಣ ಜನರಿಗೆ ಸರಕಾರದ ವಿವಿಧ ಯೋಜನೆಗಳ ಸಿಗುವಂತಹ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಲು ಪ್ರೇರಣೆ ಸಿಕ್ಕಂತಾಗಿದೆ. ವಿಕೇಂದ್ರೀಕರಣ ವ್ಯವಸ್ಥೆಯಡಿ ಸ್ಥಾಪಿತವಾದ ಗ್ರಾಮ ಪಂಚಾಯತ್ ಗ್ರಾಮೀಣ ಜನರಿಗೆ ಅತೀ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತ ಮಹತ್ತರ ಪಾತ್ರವಹಿಸುತ್ತಿದೆ. ಇಲ್ಲಿ ಮೇಲಾಧಿಕಾರಿಗಳ ಮಾರ್ಗದರ್ಶನ, ಚುನಾಯಿತ ಜನಪ್ರತಿನಿಧಿಗಳ ಸಹಕಾರ, ಸಿಬ್ಬಂದಿ ವರ್ಗದವರ ಕಾರ್ಯ ನಿರ್ವಹಣೆಯಿಂದ ಮಾತ್ರ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಿದ್ದು, ಸಹಕರಿಸಿದ ಹಾಗೂ ಪ್ರಶಸ್ತಿಗೆ ಪರಿಗಣಿಸಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ್, ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಎನ್.ಜಿ. ನಾಯಕ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ ಸೇರಿದಂತೆ ಇತರರು ಉಪಸ್ಥಿತರಿದ್ದರು.

300x250 AD

ಉದಯ ಬೋರಕರ್ ಡಿಎಡ್, ಬಿಎ ಪದವಿಧರರಾಗಿದ್ದು, 2016ರಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಪ್ರಾರಂಭಿಸಿದ್ದಾರೆ. ಈ ಹಿಂದೆ ಶಿರಾಲಿ, ಹಾಡವಳ್ಳಿ ಹಾಗೂ ಮುಂಡಳ್ಳಿ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬೇಂಗ್ರೆ ಗ್ರಾಮ ಪಂಚಾಯತಿಯಲ್ಲಿ ಪಿಡಿಒ ಹುದ್ದೆ ಕಾರ್ಯ ನಿರ್ವಹಿಸುವುದರ ಜೊತೆಗೆ ಭಟ್ಕಳ ತಾಲ್ಲೂಕು ಪಂಚಾಯತ್‌ನ ನರೇಗಾ ಸಹಾಯಕ ನಿರ್ದೇಶಕ ಹುದ್ದೆಯ ಪ್ರಭಾರೆ ವಹಿಸಿಕೊಂಡಿದ್ದಾರೆ. ಇವರ ಕಾರ್ಯಾವಧಿಯಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ODF ಪ್ರಶಸ್ತಿ ಲಭಿಸಿವೆ. ಹಾಗೇ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಅಂಗನವಾಡಿ ಮತ್ತು ಶಾಲೆ ಅಭಿವೃದ್ಧಿ ದೃಷ್ಟಿಯಿಂದ ಮೂಲಭೂತ ಸೌಲಭ್ಯ, ಕುಡಿಯುವ ನೀರು, ಅಂಗವಿಕಲರಿಗೆ ರಾಂಪ್ ನಿರ್ಮಾಣ, ಸ್ವಚ್ಛತಾ ಪರಿಕರಗಳ ವಿತರಣೆ, ಶುದ್ಧ ಕುಡಿಯುವ ನೀರಿನ ಫೀಲ್ಟರ್ ಅಳವಡಿಸುವುದು, ನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನ ಸೃಜಿಸುವ ಮೂಲಕ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ನರೇಗಾ ಕೆಲಸಕ್ಕೆ ಹೆಚ್ಚು ಕೂಲಿಕಾರರು ಬರಲು ಪ್ರೋತ್ಸಾಹಿಸಲಾಗಿದೆ. 2023-24 ನೇ ಸಾಲಿನಲ್ಲಿ ಈಗಾಗಲೇ 63 ಶೌಚಾಲಯಗಳನ್ನು ಪೂರ್ಣಗೊಳಿಸಿದ್ದು, ತಾಲ್ಲೂಕಿನ ಗರಿಷ್ಠ್ಠ ಸಾಧನೆಯಾಗಿರುತ್ತದೆ. ಬೂದು ನೀರು ನಿರ್ವಹಣೆಗೆ ಸಂಬ0ಧಿಸಿದ0ತೆ ಬೆಂಗ್ರೆ ಮಜರೆಯನ್ನು ಆಯ್ದುಕೊಂಡು ಸದರಿ ಮಜರೆಯ ಎಲ್ಲಾ ಮನೆಗಳಲ್ಲಿ ವೈಯಕ್ತಿಕ ಬೂದು ನೀರಿನ ರಚನೆಯನ್ನು ಮಾಡಲಾಗಿರುತ್ತದೆ.
ಬೆಂಗ್ರೆ ಗ್ರಾ.ಪಂ. ಪಿ.ಡಿ.ಒ. ಆಗಿ ಹಾಗೂ ಸಹಾಯಕ ನಿರ್ದೇಶಕರು (ಗ್ರಾ.ಉ) ತಾಲೂಕ ಪಂಚಾಯತ ಭಟ್ಕಳ ಹುದ್ದೆಯ ಪ್ರಭಾರೆಯನ್ನು ವಹಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠ್ಠಾನ ಮಾಡಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಿದ್ದಾರೆ.

Share This
300x250 AD
300x250 AD
300x250 AD
Back to top