ಹಳಿಯಾಳ: ಗ್ರಾಮೀಣ ಭಾಗದ ಮಹಿಳೆಯರು ಕೂಲಿ ಕೆಲಸ ಹಾಗೂ ಇತರ ಕೆಲಸಗಳಿಗೆ ಹೋಗುವ ಮಹಿಳೆಯರಿಗೆ ಅವರ ಮಕ್ಕಳನ್ನು ಬಿಟ್ಟು ಹೋಗುವುದು ದೊಡ್ಡ ಸಮಸ್ಯೆಯಾಗಿದ್ದು, ಈಗ ಆ ಸಮಸ್ಯೆಗಳಿಗೆ ಪರಿಹಾರವೆಂಬಂತೆ ಕೂಸಿನ ಮನೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಯಾಸ್ಮಿನ್ ಹುಸೇನಸಾಬ್ ಕುಂಬಾರ ಹೇಳಿದರು.
ಹಳಿಯಾಳ ತಾಲೂಕಿನ ಸಾಂಬ್ರಾಣಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಾರಂಭಿಸಲಾದ ಕೂಸಿನಮನೆ ಉದ್ಘಾಟಿಸಿ ಮಾತನಾಡಿ, ಕೂಲಿ ಕಾರ್ಮಿಕರ ಮಕ್ಕಳ ಆರೋಗ್ಯ ಮತ್ತು ಪೌಷ್ಠಿಕತೆಗೆ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಕೂಸಿನಮನೆಗಳನ್ನು ಪ್ರಾರಂಭಿಸಲಾಗುತ್ತಿದ್ದು, ಗ್ರಾಮೀಣ ಮಹಿಳೆಯರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು ಸಹಾಯಕವಾಗಿದೆ ಎಂದರು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಎಮ್.ಎಸ್ ಸವಣೂರ ಮಾತನಾಡಿ, ಶಿಶು ಆರೈಕೆದಾರರಿಗೆ ಏಳು ದಿನಗಳ ತರಬೇತಿ ನೀಡಲಾಗಿದ್ದು, ಮಕ್ಕಳ ಪೋಷಣೆ ಮತ್ತು ಆರೈಕೆಗೆ ಸಿದ್ಧರಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮಂಜುನಾಥ ಮಿರಾಶಿ, ಮಾಜಿ ಅಧ್ಯಕ್ಷ ಐ.ಸಿ ಕಾಮಕರ, ಗ್ರಾಮ ಪಂಚಯತಿ ಕಾರ್ಯದರ್ಶಿ ರಾಮಾ ಲಕ್ಕಪ್ಪ ಲಮಾಣಿ, ಐಇಸಿ ಸಂಯೋಜಕಿ ಸೌಂದರ್ಯ ಕುರಕುರಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಶಿಶು ಆರೈಕೆದಾರರು ಮತ್ತು ಮಕ್ಕಳು ಹಾಗೂ ಸಾರ್ವಜನಿಕರು ಹಾಜರಿದ್ದರು