ಹೊನ್ನಾವರ: ಇಂಗ್ಲಿಷ್ ಭಾಷೆ ವಿಶ್ವ ಮಾನ್ಯ ಭಾಷೆಯಾಗಿದೆ. ಇಂಗ್ಲಿಷ್ ಭಾಷೆಯನ್ನು ತಮ್ಮದಾಗಿಸಿಕೊಳ್ಳಬೇಕಾದರೆ ವ್ಯಾಕರಣವನ್ನು ಸರಿಯಾಗಿ ತಿಳಿದುಕೊಳ್ಳಬೇಕಾಗಿರುತ್ತದೆ ಎಂದು ಪ್ರೊ. ಭಾರ್ಗವ ಭಟ್ ಕಡೆಕೋಡಿ ನುಡಿದರು.
ಇವರು ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ “ಇಂಗ್ಲಿಷ್ ಪ್ರೇರಣಾ ಶಿಬಿರ”ದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಆಡಳಿತಾಧಿಕಾರಿ ಎಂ.ಎಸ್. ಹೆಗಡೆ ಗುಣವಂತೆ ಮಾತನಾಡಿ ಇಂಗ್ಲಿಷ್ ಭಾಷೆಯ ಜ್ಞಾನವನ್ನು ಸರಿಯಾಗಿ ಪಡೆದುಕೊಂಡರೆ ವಿಶ್ವದ ಯಾವ ದೇಶದಲ್ಲಾದರೂ ಉದ್ಯೋಗವನ್ನು ಮಾಡಬಹುದು, ಬದುಕನ್ನು ಹಸನವನ್ನಾಗಿಸಿಕೊಳ್ಳಬಹುದು,ಈ ಶಿಬಿರದ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ನುಡಿದರು. ಇದೇ ಸಂದರ್ಭದಲ್ಲಿ ಪ್ರೊ. ಭಾರ್ಗವ ಭಟ್ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕಿ ವೈಲೆಟ್ ಫರ್ನಾಂಡಿಸ್ ಸ್ವಾಗತಿಸಿದರು. ಶಿಕ್ಷಕಿ ಕೀರ್ತಿ ನಾಯ್ಕ ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.