ಕಾರವಾರ: ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಕಾರವಾರ ಹೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಫೆ.17 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಹಕರ ವಿದ್ಯುತ್ ಸಮಸ್ಯೆಗಳಿಗೆ ಸಂಬಂಧಿಸಿದಂತೆ “ವಿದ್ಯುತ್ ಅದಾಲತ್” ನಡೆಯಲಿದೆ. ಹಾಗೂ ಮಧ್ಯಾಹ್ನ 3.30 ಗಂಟೆಗೆ “ಗ್ರಾಹಕರ ಸಂವಾದ ಸಭೆ” ನಡೆಯಲಿದೆ. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಕಾರವಾರ ಉಪವಿಭಾಗದ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನೀಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.17ಕ್ಕೆ ವಿದ್ಯುತ್ ಅದಾಲತ್: ಗ್ರಾಹಕರ ಸಂವಾದ ಸಭೆ
