Slide
Slide
Slide
previous arrow
next arrow

ಮಹಿಳೆಯರು ಸ್ವಾವಲಂಬಿಗಳಾಗಬೇಕು: ಸಿಇಒ ಕಾಂದೂ

300x250 AD

ಕಾರವಾರ: ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಸರ್ಕಾರವು ವಿವಿಧ ಯೋಜನೆ ಮೂಲಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಹಿಳೆಯರು ಸಬಲರಾಗಬೇಕು ಎಂದು ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರಕುಮಾರ ಕಾಂದೂ ಅವರು ಹೇಳಿದರು.

ಅವರು ಗುರುವಾರ ಹಳಿಯಾಳ ಪಟ್ಟಣದ RSETI ಸಂಸ್ಥೆಗೆ ಭೇಟಿ ನೀಡಿ ಕೇಂದ್ರದಲ್ಲಿ ಜರುಗುತ್ತಿರುವ ಹೊಲಿಗೆ ತರಬೇತಿಯ ಶಿಬಿರಾರ್ಥಿಗಳನ್ನು ಕುರಿತು ಮಾತನಾಡಿ, RSETI ಯು ಉತ್ತಮ ಗುಣ ಮಟ್ಟದ ಉಚಿತ ತರಬೇತಿ ನೀಡುವ ಸಂಸ್ಥೆಯಾಗಿದ್ದು, ವಿಶೇಷವಾಗಿ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತದೆ. ತರಬೇತಿ ಉಪಯೋಗ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಿ ಎಂದು ಹಾರೈಸಿದರು.
ನಂತರ ತೇರಗಾಂವ್ ಕಾವಲವಾಡ ಸೇರಿದಂತೆ 111 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ ಜಲ ಶುದ್ಧಿಕರಣ ಘಟಕಕ್ಕೆ ಭೇಟಿ ನೀಡಿ ಕಾಮಗಾರಿ ಗುಣಮಟ್ಟ ವೀಕ್ಷಿಸಿ ಬೇಗ ಪೂರ್ಣಗೊಳಿಸುವಂತೆ ಆದೇಶಿಸಿದರು.
ನಂತರ ಮದ್ನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದುಸಗಿ ಗ್ರಾಮದಲ್ಲಿ ನರೇಗಾ ಹಾಗೂ NRLM ಯೋಜನೆಯಡಿ ನಿರ್ಮಾಣಗೊಂಡ ಪೌಲ್ಟ್ರಿಶೇಡ್ ಕಾಮಗಾರಿಗೆ ಭೇಟಿ ನೀಡಿ ಸ್ವಸಹಾಯ ಸಂಘದ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ಕೋಳಿಗಳ ಸಂಖ್ಯೆ ಹೆಚ್ಚಿಸಲು ಸಲಹೆ ನೀಡಿದರು. ಹಾಗೂ ಮದ್ನಳ್ಳಿ ಗ್ರಾ.ಪಂ ವ್ಯಾಪ್ತಿಯ ಪರಿಶಿಷ್ಟ ಪಂಗಡಗಳ ಇಲಾಖೆಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸಿ ಮಕ್ಕಳ ಕಲಿಕೆಗೆ ಅವಶ್ಯವಿರುವ ಪರಿಕರಗಳನ್ನು ಒದಗಿಸುವಂತೆ ತಿಳಿಸಿದರು.

300x250 AD

ಈ ಸಂದರ್ಭದಲ್ಲಿ ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಪರಶುರಾಮ ಎಂ ಘಸ್ತೆ ಹಾಗೂ ಪ್ರಕಾಶ ಕಲ್ಲಮ್ಮನವರ, ನರೇಗಾ ಸಹಾಯಕ ನಿರ್ದೇಶಕರಾದ ಎನ್.ಎಮ್ ಕುಮಾರ ಹಾಗೂ ಸಂತೋಷ ರಾಥೋಡ, ತಾಲೂಕ ಪಂಚಾಯತ ವ್ಯವಸ್ಥಾಪಕ ರವೀಂದ್ರ, ತಾಲೂಕ ಮಟ್ಟದ ಅಧಿಕಾರಿಗಳು, ನರೇಗಾ ಮತ್ತು ಓಖಐಒ ಸಿಬ್ಬಂದಿಗಳು, ತಾಲೂಕ ಪಂಚಾಯತ ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

Share This
300x250 AD
300x250 AD
300x250 AD
Back to top