ಕಾರವಾರ: ಜಿಲ್ಲೆಯ ಮುಂಡಗೋಡ ಜವಾಹರ ನವೋದಯ ವಿದ್ಯಾಲಯವು 2021-21 ಸಾಲಿನ 9 ನೇ ತರಗತಿಯ ಖಾಲಿ ಇರುವ ಸ್ಥಾನಗಳ ಭರ್ತಿಗೆ ಪ್ರವೇಶ ಪರೀಕ್ಷೆಗಳನ್ನು ಕೈಗೊಳ್ಳುತ್ತಿದ್ದು, ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನ, ಹೆಚ್ಚಿನ ಮಾಹಿತಿಗಾಗಿ ವಿದ್ಯಾಲಯದ ವೆಬ್‍ಸೈಟ್ www.navodaya.gov.in ಮತ್ತು www.nvsadmissionclassnine.in ಗೆ ಸಂಪರ್ಕಿಸಬಹುದಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.