ಕುಮಟಾ: ಇಲ್ಲಿನ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ. ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಪಾವನಿ ಶ್ರೀಧರ ನಾಯ್ಕ ಇವಳು ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಪುರಾತತ್ವ ಸಂಗ್ರಹಾಲಯ, ಪರಂಪರೆ ಇಲಾಖೆ ಮತ್ತು ಪ್ರವಾಸೋಧ್ಯಮ ಇಲಾಖೆ ಇವರು ನಡೆಸಿದ ರಾಜ್ಯ ಮಟ್ಟದ ಪ್ರಾಚ್ಯಪ್ರಜ್ಞೆ ಸ್ಪರ್ಧೆಯ ಚಿತ್ರಕಲೆಯಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾಳೆ. ಇವಳ ಈ ಸಾಧನೆಗೆ ಆಡಳಿತ ಮಂಡಳಿಯವರು, ಮುಖ್ಯಾಧ್ಯಾಪಕರು, ಶಿಕ್ಷಕವರ್ಗದವರು ಅಭಿನಂದಿಸಿದ್ದಾರೆ.
ಪ್ರಾಚ್ಯಪ್ರಜ್ಞೆ: ಪಾವನಿ ರಾಜ್ಯಕ್ಕೆ ತೃತೀಯ
