ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾಜ್ಯದ ಬಜೆಟ್ ಮಂಡನೆ ಮಾಡಿದ್ದು, 2024-2025ರ ಕರ್ನಾಟಕ ಬಜೆಟ್ ಗಾತ್ರ 3.71383 ಲಕ್ಷ ಕೋಟಿ ಎಂದು ತಿಳಿಸಿದ್ದಾರೆ. ಇದು 2023ರಲ್ಲಿ ಸಿದ್ದರಾಮಯ್ಯ ಮಂಡಿಸಿದ 3.27 ಲಕ್ಷ ಕೋಟಿಗಿಂತ ಇದು ಹೆಚ್ಚಾಗಿದೆ. 2024-25ರ ಆಯವ್ಯಯದಲ್ಲಿ ಒಟ್ಟು 3,68,674 ಕೋಟಿ ರೂ.ಗಳ ಸ್ವೀಕೃತಿಯನ್ನು ಅಂದಾಜು ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.2024-25ನೇ ಸಾಲಿನಲ್ಲಿ ಒಟ್ಟು 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡಿದ್ದು, ಬಜೆಟ್ ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಸಿದ್ದರಾಮಯ್ಯ ತನ್ನ ಬಜೆಟ್ ಮಂಡನೆಯಲ್ಲಿ ತಿಳಿಸಿದ್ದಾರೆ.2024-25ರಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ, ರಾಜ್ಯದ ಜಿ.ಎಸ್.ಡಿ.ಪಿಯ ಶೇ.2.95ರಷ್ಟಿದೆ. ಜಿ.ಎಸ್.ಡಿ.ಪಿಯ 23.680 ತಲುಪಲಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಜೆಟ್ ಪ್ರಮುಖಾಂಶಗಳು…
* ಬಿಯರ್ ದರ ಮತ್ತೆ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ
* ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲು
* ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ರೂ.ನಿಗದಿ
* ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ಹೋಟೆಲ್ ಕೆಫೆ ನಿರ್ಮಾಣ – ಸ್ಥಳೀಯ ಆಹಾರಕ್ಕೆ ಒತ್ತು
* ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ರೂಪಿಸಲು ಸರ್ಕಾರದ ತೀರ್ಮಾನ
* ಬೆಂಗಳೂರು ನಗರ ವಿಶ್ವದರ್ಜೆಗೇರಿಸಲು ಬ್ರಾಂಡ್ ಬೆಂಗಳೂರು
* ಬೆಂಗಳೂರು ಟ್ರಾಫಿಕ್ ಜಾಮ್‌ಗೆ ಸುರಂಗ ಮಾರ್ಗ ಪರಿಹಾರ
* ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ
* ಹೊಸದಾಗಿ 44 ಕಿ. ಮೀ. ಮೆಟ್ರೋ ಮಾರ್ಗ ಸೇರ್ಪಡೆ
* ವಿಮಾನ ನಿಲ್ದಾಣ ಮೆಟ್ರೋ ಮಾರ್ಗ 2026ಕ್ಕೆ ಪೂರ್ಣ
* ಕಾವೇರಿ ಹಂತ – 5: ಡಿಸೆಂಬರ್ 2024ರ ಒಳಗೆ ಕಾಮಗಾರಿ ಪೂರ್ಣ
* ಬೆಂಗಳೂರಿನ ಕೆ. ಸಿ. ಜನರಲ್ ಆಸ್ಪತ್ರೆ ಅಭಿವೃದ್ದಿಗೆ 150 ಕೋಟಿ ರೂ. ಅನುದಾನ
* ಸಿಎಂ ಸಿದ್ದು ಪ್ರತಿನಿಧಿಸುವ ವರುಣಾ ಕ್ಷೇತ್ರಕ್ಕೆ 2 ಸಾವಿರ ಕೋಟಿ ರೂ. ಮೀಸಲು
* ಆನೇಕಲ್, ನೆಲಮಂಗಲದಲ್ಲಿ ಹೊಸ ಆಸ್ಪತ್ರೆ
* ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ
* ಮಾಜಿ ಸಿಎಂ ಎಸ್. ಬಂಗಾರಪ್ಪ ಸ್ಮಾರಕ ನಿರ್ಮಾಣ ಘೋಷಣೆ
* ಬಸವ ಜಯಂತಿಯಂದು ಸರ್ವ ಧರ್ಮ ಸಂಸತ್ತು ಆಯೋಜನೆ
* ವಾರಣಾಸಿಯಲ್ಲಿ ಕರ್ನಾಟಕದ ಭಕ್ತರಿಗೆ ವಸತಿ ಸಂಕೀರ್ಣ
* ಮಂಗಳೂರಿನಲ್ಲಿ ಹಜ್ ಭವನ ಕಾಮಗಾರಿಗೆ 10 ಕೋಟಿ ರೂ
* ವಿಜಯಪುರದಲ್ಲಿ ತೋಟಗಾರಿಕಾ ಕಾಲೇಜು
* ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ದಿ ಯೋಜನೆ
* ಸಿರಿಧಾನ್ಯಗಳಿಗಾಗಿ ‘ನಮ್ಮ ಮಿಲ್ಲೆಟ್’ ಹೊಸ ಯೋಜನೆ ಪ್ರಾರಂಭ
* ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್
* 80 ವರ್ಷ ದಾಟಿದ ವೃದ್ಧರಿಗೆ ಆಹಾರ ಒದಗಿಸಲು ‘ಅನ್ನ ಸುವಿಧಾ’ ಯೋಜನೆ
* ಕಲ್ಯಾಣ ಪಥ ಯೋಜನೆ ಅಡಿ ಕಲ್ಯಾಣ ಕರ್ನಾಟಕದಲ್ಲಿ ರಸ್ತೆ ಅಭಿವೃದ್ದಿ
* ಬೆಳಗಾವಿ ನಗರದಲ್ಲಿ 4.5 ಕಿ. ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ ಮೇಲ್ಸೇತುವೆ ನಿರ್ಮಾಣ
* ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ
* ಉತ್ತರ ಕನ್ನಡ ಜಿಲ್ಲೆ ಮುರುಡೇಶ್ವರದಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ
* ಇದೇ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಪರಿಚಯ
* ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ
* ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್
* 2000 ಶಾಲೆಗಳು ಕನ್ನಡ ಮತ್ತು ಇಂಗ್ಲೀಷ್ ದ್ವಿಭಾಷಾ ಶಾಲೆಯಾಗಿ ಪರಿವರ್ತೆನೆಯ ಘೋಷಣೆ
* ಐಐಟಿ ಮಾದರಿಯಲ್ಲಿ ಬೆಂಗಳೂರು ವಿಶ್ವೇಶ್ವರಯ್ಯ ವಿಶ್ವವಿದ್ಯಾಲಯ 500 ಕೋಟಿ ರೂ ವೆಚ್ಚದಲ್ಲಿ ಮೇಲ್ದರ್ಜೇಗೆ
* ಸಿಎಸ್ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ, ಕಲಿಕಾ ಸಾಮರ್ಥ್ಯ ಸುಧಾರಿಸಲು ಮರು ಸಿಂಚನ ಕಾರ್ಯಕ್ರಮ
* ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಣೆ, ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಜಮೀನಿನಲ್ಲಿ ತ್ಯಾಜ್ಯ ಸಂಸ್ಕರಣೆ
* ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ 400 ಕೋಟಿ ರೂ.
* ಸುಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ 130 ಕೋಟಿ ರೂ.
* ಸಿರಿ ಧಾನ್ಯ ಉತ್ಪನ್ನ ಹೆಚ್ಚಳಕ್ಕೆ ಕ್ರಮ: ನಮ್ಮ ಮಿಲೆಟ್ ಹೆಸರಿನಲ್ಲಿ ನೂತನ ಯೋಜನೆ
* ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪನೆಗೆ ತಜ್ಞರ ಸಮಿತಿ
* ಮೇನಲ್ಲಿ ಕಾವೇರಿ ಹಂತ-5 ಕಾರ್ಯಾರಂಭ, 5550 ಕೋಟಿ ರೂ. ವೆಚ್ಚದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿಯಿಂದ ಯೋಜನೆ. ಪ್ರತಿ ದಿನ 12 ಲಕ್ಷ ಜನರಿಗೆ 110 ಲಕ್ಷ ಲೀಟರ್ ಕುಡಿಯುವ ನೀರು ಪೂರೈಕೆ ಮಾಡಲು ಉದ್ದೇಶ
* ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಶಿರಹಟ್ಟಿ ತಾಲೂಕಿಗಳಲ್ಲಿ 280 ಕೋಟಿ ವೆಚ್ಚದಲ್ಲಿ 100 ಹಾಸಿಗೆ ಆಸ್ಪತ್ರೆ ನಿರ್ಮಾಣ.
* ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾ-ಮಕ್ಕಳ ಮೂಲಸೌಕರ್ಯ ಕಾಮಗಾರಿ 150 ಕೋಟಿ ವೆಚ್ಚದಲ್ಲಿ ಪ್ರಾರಂಭ.
* ಕಲ್ಯಾಣ ಕರ್ನಾಟಕ ಭಾಗದಲ್ಲಿ 221 ಕೋಟಿಗಳ ವೆಚ್ಚದಲ್ಲಿ 46 ಹೊಸ ಪ್ರಾಥಮಿಕ ಕೇಂದ್ರಗಳ ಸ್ಥಾಪನೆ
* ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಳ