ಜೋಯಿಡಾ: ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಉಳವಿ ಚೆನ್ನಬಸವೇಶ್ವರ ದೇವಸ್ಥಾನದ ಜಾತ್ರೆ ಇಂದಿನಿಂದ ಆರಂಭವಾಗುತ್ತಿದ್ದು, ಫೆ: 26ರಂದು ಸಂಪನ್ನಗೊಳ್ಳಲಿದೆ. ಫೆಬ್ರವರಿ 24ರಂದು ಶ್ರೀ ಚನ್ನಬಸವೇಶಣ್ಣನ ಮಹಾ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಜಾತ್ರೋತ್ಸವಕ್ಕೆ ಆಗಮಿಸುವ ಭಕ್ತಾದಿಗಳು ಜಾತ್ರೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಶ್ರೀ ಚನ್ನಬಸವೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶಂಕ್ರಯ್ಯ ಕಲ್ಮಠ ಶುಕ್ರವಾರ ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.
ಫೆ.24ಕ್ಕೆ ಶ್ರೀಕ್ಷೇತ್ರ ಉಳವಿಯಲ್ಲಿ ರಥೋತ್ಸವ
