ಜೋಯಿಡಾ : ತಾಲೂಕಿನ ಉಳವಿ ಗ್ರಾಮವನ್ನು ಇಕೋ ವಿಲೇಜ್ ಎಂದು ಘೋಷಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿಸಲು ಈಗಾಗಲೇ ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಉಳವಿ ಜಾತ್ರೆಗೆ ಬರುವ ಭಕ್ತಾದಿಗಳು ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಕೈಜೋಡಿಸಬೇಕು ಮತ್ತು ಸ್ವಚ್ಛ ಭಾರತ ಅಭಿಯಾನಕ್ಕೂ ಕೈಜೋಡಿಸಿ, ಸಹಕರಿಸಬೇಕೆಂದು ಜೋಯಿಡಾದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿ ಶುಕ್ರವಾರ ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.
ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಕೈ ಜೋಡಿಸಿ: ಆನಂದ ಬಡಕುಂದ್ರಿ
