ಯಲ್ಲಾಪುರ: ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ ಯಲ್ಲಾಪುರ, ಗ್ರೀನ್ ಕೇರ್ (ರಿ.) ಶಿರಸಿ, ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕಿರವತ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ.17,ಶನಿವಾರ ಯಲ್ಲಾಪುರ ತಾಲೂಕಿನ ಕಿರವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕರಿಯವ್ವನ ಗುಂಡಿ ಎಂಬ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಯಲ್ಲಾಪುರ ತಾಲೂಕಿನ ಆರೋಗ್ಯಾಧಿಕಾರಿಗಳಾದ ಡಾ. ನರೇಂದ್ರ ಪವಾರ್ ದೀಪ ಬೆಳಗಿಸಿ ಮಾತನಾಡಿ ಗ್ರೀನ್ ಕೇರ್ ಸಂಸ್ಥೆಯವರ ಕೆಲಸದ ಬಗ್ಗೆ ಪ್ರಶಂಸಿಸಿ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ ನವದೆಹಲಿಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಶ್ಯಾಮ್ ಸುಂದರ್ ಎಸ್. ಮತ್ತು ಸೀತಾರಾಮ್ ಭಾರತೀಯ ಆಸ್ಪತ್ರೆ, ನವದೆಹಲಿಯ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು ಡಾ. ಸಹನಾ ಶ್ರೀನಿವಾಸ್ ಉಪಸ್ಥಿತರಿದ್ದರು. ಡಾಕ್ಟರ್ ಶ್ಯಾಮಸುಂದರ್ ಮಾತನಾಡಿ ಹಳ್ಳಿಗಳಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ ಮತ್ತು ಜಾಗೃತಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅತಿಥಿಗಳಾದ ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಎಸ್. ಟಿ. ಭಟ್ ಹಳ್ಳಿಗಳಲ್ಲಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಮಾತನಾಡಿದರು. ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿಗಳಾದ ಜಿತೇಂದ್ರ ಕುಮಾರ್ ತೋನ್ಸೆ ಮಾತನಾಡಿ ಪರಿಸರದ ಸ್ವಚ್ಛತೆ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಯಲ್ಲಾಪುರ ತಾಲೂಕಿನ ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಎಸ್. ಎಸ್. ಪಾಟೀಲ್, ಯು. ಜೋಸೆಫ್, ಮಹೇಶ್ ತಾಳಿಕೋಟೆ, ಗ್ರೀನ್ ಕೇರ್ ಸಂಸ್ಥೆಯ ನಿರ್ದೇಶಕರುಗಳಾದ ಗಜಾನನ ಭಟ್ ಮತ್ತು ಶ್ರೀಮತಿ ಆಶಾ ಡಿಸೋಜಾರವರು, ಕಿರವತ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕುಮಾರಿ ಅಶ್ವಿನಿ. ಎಸ್, ಅಂಗನವಾಡಿ ಕಾರ್ಯಕರ್ತೆ ರಜಿಯಾ. ಪಿ., ಮತ್ತು ಆಶಾ ಕಾರ್ಯಕರ್ತೆ ಶ್ರೀಮತಿ ಶೋಭಾ ಹರಿಜಾನ್ ಉಪಸ್ಥಿತರಿದ್ದರು. ಶಿಬಿರದಲ್ಲಿ ಡಾ॥ ಶ್ಯಾಮ್ ಸುಂದರ್. ಎಸ್. ಮತ್ತು ಡಾ॥ ಸಹನಾ ಶ್ರೀನಿವಾಸ್ ಅವರು ಎಲ್ಲಾ ಶಿಬಿರಾರ್ಥಿಗಳನ್ನು ಪರೀಕ್ಷಿಸಿ ಸೂಕ್ತ ಔಷಧಿಗಳನ್ನು ವಿತರಿಸಲಾಯಿತು. ಶಿಬಿರದಲ್ಲಿ ಒಟ್ಟು 75 ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು ಕಾರ್ಯಕ್ರಮವನ್ನು ಗ್ರೀನ್ ಕೇರ್ ಸಂಸ್ಥೆಯ ಕಾರ್ಯದರ್ಶಿಗಳು ನಿರೂಪಿಸಿ ವಂದಿಸಿದರು.