ಕಾರವಾರ -ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಫೆ.25 ರಂದು ಬೆಂಗಳೂರಿನಲ್ಲಿ ನಡೆಯುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿವಿಧ ಸಂಘಟನೆಯ ಮುಖಂಡರು ಮತ್ತು ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲು ಫೆ.24 ರಂದು ಸಂಜೆ ವಿವಿಧ ತಾಲೂಕುಗಳಿಂದ ಬಸ್‌ಗಳಲ್ಲಿ ಹೊರಡಲು ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು https://forms.gle/vzDDmXeVr66Nuf3VA ಗೂಗಲ್ ಫಾರ್ಮ್ನಲ್ಲಿ ಅಥವಾ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಫೆ.21 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.