Slide
Slide
Slide
previous arrow
next arrow

ಫೆ.22ಕ್ಕೆ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

300x250 AD

ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮವು ಫೆ.22 ರಂದು ಬೆಳಗ್ಗೆ 10 ಗಂಟೆಗೆ ಮಾಲಾದೇವಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ. ಸೈಲ್, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಸಂಸದ ಅನಂತಕುಮಾರ ಹೆಗಡೆ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೇಕರ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮನೋಜ ಬಾಂದೇಕರ, ನಗರಸಭೆ ಸದಸ್ಯೆ ರತ್ನಾ ರತ್ನಾಕರ ನಾಯ್ಕ ಮತ್ತಿತರು ಪಾಲ್ಗೊಳ್ಳಲಿದ್ದಾರೆ.

300x250 AD
Share This
300x250 AD
300x250 AD
300x250 AD
Back to top