Slide
Slide
Slide
previous arrow
next arrow

ಅಂಕೋಲಾ ಬಿಜೆಪಿ‌ ಮಂಡಲದ ಚುಕ್ಕಾಣಿ ಹಿಡಿದ ಗೋಪಾಲಕೃಷ್ಣ ವೈದ್ಯರಿಗೆ ಸನ್ಮಾನ

300x250 AD

ಅಂಕೋಲಾ: ತಾಲೂಕಿನ ಕಲ್ಲೇಶ್ವರದ ಗೋಪಾಲಕೃಷ್ಣ ಹಾಗೂ ದೇವಿ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಅಂಕೋಲಾ‌ ತಾಲೂಕಿನ ನೂತನ ಮಂಡಲಾಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೈದ್ಯ ಅವರನ್ನು ಡೋಂಗ್ರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಸನ್ಮಾನಿಸಿ, ಶುಭ ಹಾರೈಸಿದರು.

ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಗೋಪಾಲಕೃಷ್ಣ ವೈದ್ಯ ನನ್ನ ರಾಜಕೀಯ ಪ್ರವೇಶ ಅನಿರೀಕ್ಷಿತ. ಈ ಹಿಂದೆ ಡೋಂಗ್ರಿ ಪಂಚಾಯತ್ ಅಧ್ಯಕ್ಷನಾಗಿ ಹಲವು ವರ್ಷಗಳ ಕಾಲ ಪಂಚಾಯತ್ ಅಭಿವೃದ್ಧಿಗೆ ಶ್ರಮಿಸುವ ಅವಕಾಶ ದೊರಕಿದೆ. ಪಕ್ಷ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ಪ್ರತಿಯೊಬ್ಬ ತಳಮಟ್ಟದ ಕಾರ್ಯಕರ್ತರ ವಿಶ್ವಾಸ ಗಳಿಸಿ ಪಕ್ಷದ ಸಂಘಟನೆ ಮಾಡುತ್ತೇವೆ ಎಂದು ಹೇಳಿದರು.

300x250 AD

ಈ ಸಂದರ್ಭದಲ್ಲಿ ಪ್ರಮುಖರಾದ ಕಲ್ಪತರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಿವರಾಮ ಭಟ್ಟ ಗುಡ್ಡೆ, ಹಿರಿಯರಾದ ಮ.ರಾ.ಭಟ್ಟ, ಎನ್.ವಿ.ಹೆಗಡೆ, ಡೋಂಗ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿನೋದ (ಪುಟ್ಟು) ಭಟ್ಟ‌ ಮಾತನಾಡಿದರು. ಈ ಸಂದರ್ಭದಲ್ಲಿ ಡೋಂಗ್ರಿ ಶಕ್ತಿ ಕೇಂದ್ರದ ಬೂತ್ ಅಧ್ಯಕ್ಷರು, ಬಿಜೆಪಿ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಇದ್ದರು. ನಾರಾಯಣ ಹೆಗಡೆ ಸ್ವಾಗತಿಸಿದರು, ಶೇಖರ್ ಗಾಂವಕರ್ ವಂದಿಸಿದರು, ಶಶಾಂಕ ಹೆಗಡೆ ನಿರೂಪಿಸಿದರು.

Share This
300x250 AD
300x250 AD
300x250 AD
Back to top