Slide
Slide
Slide
previous arrow
next arrow

ದಾಂಡೇಲಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

300x250 AD

ದಾಂಡೇಲಿ : ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಸಮಿತಿಯ ಆಶ್ರಯದಡಿ ಆಯೋಜಿಸಲಾಗಿದ್ದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವು ಸಂಭ್ರಮ ಸಡಗರದಿಂದ ಸೋಮವಾರ ರಾತ್ರಿ ಸಂಪನ್ನಗೊಂಡಿತ್ತು.

ಸೋಮವಾರ ಬೆಳಿಗ್ಗೆ ಸ್ಥಳೀಯ ಗಾಂಧಿನಗರದಲ್ಲಿ ಶ್ರೀಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆಯನ್ನು ಸಲ್ಲಿಸಿ ಆನಂತರ ನಗರದ ಸೋಮಾನಿ ವೃತ್ತದ ಹತ್ತಿರವಿರುವ ಶ್ರೀಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆಯನ್ನು ಸಲ್ಲಿಸಲಾಯಿತು. ಸಂಜೆ ಗಾಂಧಿನಗರದಿಂದ ಆರಂಭಗೊಂಡ ಶ್ರೀ.ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಭವ್ಯ ಶೋಭಾ ಯಾತ್ರೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೊನೆಯಲ್ಲಿ ಸೋಮಾನಿ ವೃತ್ತದ ಹತ್ತಿರವಿರುವ ಶ್ರೀ.ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಆವರಣದಲ್ಲಿ ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಶ್ರೀ.ಛತ್ರಪತಿ ಶಿವಾಜಿ ಮಹಾರಾಜ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರಮಿಸಿದ್ದರು.

300x250 AD

Share This
300x250 AD
300x250 AD
300x250 AD
Back to top