Slide
Slide
Slide
previous arrow
next arrow

ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ: ಪ್ರವೇಶಕ್ಕೆ ಅರ್ಜಿ ಆಹ್ವಾನ

300x250 AD

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಶೈಕ್ಷಣಿಕ ಸಾಲಿಗೆ ದಾಂಡೇಲಿಯ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, 6ನೇ ತರಗತಿ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಮತ್ತು ಪ.ಜಾತಿ/ಪ.ಪಂಗಡ, ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 75% ಅಲ್ಪಸಂಖ್ಯಾತರ ಸಮುದಾಯದವರಿಗೆ ಹಾಗೂ 25% ಇತರರಿಗೆ ಪ್ರವೇಶಾತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 15 ಅರ್ಜಿ ಸಲ್ಲಿಸಲು ವೆಬ್‌ಸೈಟ್ https://sevasindhu.karnataka.gov.in/ ಗೆ ಭೇಟಿ ನೀಡಬಹುದಾಗಿದೆ.

300x250 AD

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ:Tel:+918277799990/ Tel:+9108382-220336, ವೆಬ್‌ಸೈಟ್ https://dom.karnataka.gov.in/ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಅಥವಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದಾಗಿದೆ.

Share This
300x250 AD
300x250 AD
300x250 AD
Back to top