ಕಾರವಾರ: ಗೃಹಲಕ್ಷ್ಮಿ ಯೋಜನೆಯಡಿ ಆದೇಶ ಮತ್ತು ಮಾರ್ಗಸೂಚಿಯನ್ವಯ IT/GST ತೆರಿಗೆ ಪಾವತಿದಾರರು ಧನ ಸಹಾಯ ಪಡೆಯಲು ಅರ್ಹರಿರುವುದಿಲ್ಲ. ಯೋಜನೆಯ ತಂತ್ರಾಂಶದಲ್ಲಿ ಸಲ್ಲಿಸಿದ ಅರ್ಜಿಯ ಸ್ಥಿತಿ ಪರಿಶೀಲಿಸಿದಾಗ IT/GST ತೆರಿಗೆ ಪಾವತಿದಾರರು ಎಂದು ಗೋಚರವಾಗುತ್ತಿದ್ದು ನೈಜವಾಗಿ ತೆರಿಗೆ ಪಾವತಿದಾರರಲ್ಲ ಎನ್ನುವ ಫಲಾನುಭವಿಗಳು ಸಂಬಂಧಪಟ್ಟ IT/GST ಇಲಾಖೆ/ಪ್ರಾಧಿಕಾರಗಳಿಂದ ದೃಢೀಕರಣ ಪಡೆದು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ಸದರಿ ಮಾಹಿತಿಯನ್ನು ಪ್ರಧಾನ ಕಚೇರಿಯಿಂದ ಇ-ಆಡಳಿತ ಇಲಾಖೆಯ ಕುಟುಂಬ ತಂತ್ರಾಂಶದ ವಿಭಾಗಕ್ಕೆ ಸಲ್ಲಿಸಿ ಪುನರ್ ಪರಿಶೀಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ EDCS ಜಂಟಿ ಸಹಭಾಗಿತ್ವದಲ್ಲಿ ನಡೆದ ಸಭೆಯಲ್ಲಿ ತಿಳಿಸಿರುತ್ತಾರೆ.
ಆದ್ದರಿಂದ ನೈಜವಾಗಿ ತೆರಿಗೆ ಪಾವತಿದಾರರಲ್ಲದ ಫಲಾನುಭವಿಗಳು IT/GST ಇಲಾಖೆಯಿಂದ ದೃಢೀಕರಣ ಪತ್ರವನ್ನು ಪಡೆದು ಸಲ್ಲಿಸಲು ಕೋರಲಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.