Slide
Slide
Slide
previous arrow
next arrow

ಅರಣ್ಯ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಉತ್ತರ ಕನ್ನಡ ಜಿಲ್ಲೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಬುಡಕಟ್ಟು ಜನರು ವಾಸಿಸುವ ಪ್ರದೇಶಗಳಲ್ಲಿ ಘಟಕ ವೆಚ್ಚ ರೂ. 4 ಲಕ್ಷಗಳ ಮಿತಿಯಲ್ಲಿ ಅರಣ್ಯ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲು ಸಹಕಾರ ಸಂಘ, ಪ್ರಧಾನ ಮಂತ್ರಿ, ವನ-ಧನ ಕೇಂದ್ರ ಹಾಗೂ ಪರಿಶಿಷ್ಟ ಪಂಗಡದ ಶೇ 60% ಸದಸ್ಯರನ್ನು ಹೊಂದಿರುವ FPO (Farmer Producers Organization), FPC (Farmer Producer Companies)) ಹಾಗೂ SHG (Self Help Groups), ಗಳಿಂದ ಆಫಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಮಾರ್ಚ್ 18 ರ ವರೆಗೆ ಕಚೇರಿ ಸಮಯದಲ್ಲಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ನೆಲಮಹಡಿ ತಹಶೀಲ್ದಾರ ಕಚೇರಿ ಹಿಂದುಗಡೆ, ಎಂ.ಜಿ.ರಸ್ತೆ, ಕಾರವಾರ-581301, ಉತ್ತರ ಕನ್ನಡ ಜಿಲ್ಲೆ ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:Tel:+9108382226903 ಗೆ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು, ಮಹರ್ಷಿ ವಾಲ್ಮೀಕಿ ಅಭಿವೃಧ್ದಿ ನಿಗಮ ಕಾರವಾರ ಅವರ ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top