Slide
Slide
Slide
previous arrow
next arrow

ಶ್ರೀಅಂಬಾಭವಾನಿ ದೇವಸ್ಥಾನದಲ್ಲಿ ವರ್ಧಂತಿ ಉತ್ಸವಕ್ಕೆ ಚಾಲನೆ

300x250 AD

ದಾಂಡೇಲಿ :  ನಗರದ ಬಸವೇಶ್ವರನಗರದಲ್ಲಿರುವ ಶ್ರೀ.ಅಂಬಾಭವಾನಿ ದೇವಸ್ಥಾನದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ ಹಾಗೂ ವರ್ಧಂತಿ ಉತ್ಸವವು  ಶ್ರದ್ಧಾ ಭಕ್ತಿಯಿಂದ ನಡೆಯುತ್ತಿದೆ.

ಶುಕ್ರವಾರ ಬೆಳಿಗ್ಗೆಯಿಂದ ವಿವಿಧ ಪೂಜಾ ಕಾರ್ಯಕ್ರಮಗಳಾದ ಗಣ ಹೋಮ, ಫಲ ಪ್ರಾರ್ಥನೆ, ಗುರು ಪ್ರಾರ್ಥನೆ, ನವಗ್ರಹ ಪೂಜೆ, ನವಗ್ರಹ ದಾನ,  ಮಹಾ ಸಂಕಲ್ಪ  ಹಾಗೂ ಇನ್ನಿತರ ಪೂಜಾ ಕಾರ್ಯಕ್ರಮಗಳು ನಡೆಯುತ್ತಿದೆ.

300x250 AD

ಶುಕ್ರವಾರದ ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಫೆಬ್ರವರಿ 22 ರಿಂದ ಆರಂಭಗೊಂಡಿದ್ದ ಪುನರ್ ಪ್ರತಿಷ್ಠಾಪನೆ ಮತ್ತು ವರ್ಧಂತಿ ಉತ್ಸವವು ಫೆಬ್ರವರಿ 25ರಂದು ಸಂಪನ್ನಗೊಳ್ಳಲಿದೆ. ಕಾರ್ಯಕ್ರಮದ ಯಶಸ್ಸಿಗೆ ಶ್ರೀ ದೇವಸ್ಥಾನದ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಭಕ್ತಾಭಿಮಾನಿಗಳು ಶ್ರಮಿಸುತ್ತಿದ್ದಾರೆ.

Share This
300x250 AD
300x250 AD
300x250 AD
Back to top