Slide
Slide
Slide
previous arrow
next arrow

ಫೆ.25ಕ್ಕೆ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸಾ ಶಿಬಿರ

300x250 AD

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ, ಧಾರವಾಡದ ವಿಠ್ಡಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಷಾಲಿಟಿ ಆರೋಗ್ಯ ಕೇಂದ್ರ ಇವರ ಆಶ್ರಯದಡಿ ಫೆಬ್ರವರಿ 25ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4:30 ಗಂಟೆಯವರೆಗೆ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ಬಂಗೂರುನಗರದಲ್ಲಿರುವ ರಂಗನಾಥ ಸಭಾಭವನದಲ್ಲಿ ನಡೆಯಲಿದೆ ಎಂದು ವೆಸ್ಟ್ ಕೋಸ್ಟ್ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿಯವರು ತಿಳಿಸಿದ್ದಾರೆ.

ಅವರು  ನಗರದಲ್ಲಿ ಮಾಧ್ಯಮಕ್ಕೆ‌ ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಈ ಶಿಬಿರದಲ್ಲಿ ಪ್ರಖ್ಯಾತ ವೈದ್ಯರಾದ ಡಾ: ರಾಜನ್ ದೇಶಪಾಂಡೆ ಸೇರಿದಂತೆ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಈ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ರಾಜೇಶ್ ತಿವಾರಿ ವಿನಂತಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top