ಕಾರವಾರ: ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ , ಲೋಕಸಭಾ ಚುನಾವಣೆಯನ್ನು ಮುಕ್ತ, ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಸುವ ಕುರಿತಂತೆ , ಜಿಲ್ಲೆಯಲ್ಲಿ ಈಗಾಗಲೇ ಸಾರ್ವಜನಿಕರಿಗೆ ಪರವಾನಗಿ ನೀಡಿರುವ ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಿಕೊಳ್ಳುವ ಬಗ್ಗೆ ಮತ್ತು ತುರ್ತು ಅಗತ್ಯವಿರುವವರಿಗೆ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳಲು ಅನುಮತಿ ನೀಡುವ ಕುರಿತಂತೆ ಪರಿಶೀಲಿಸಿ ಅನುಮತಿ ನೀಡಲು ಜಿಲ್ಲಾ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ.
ಈ ಸಮಿತಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅಧ್ಯಕ್ಷರಾಗಿದ್ದು, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಉಪಾಧ್ಯಕ್ಷರಾಗಿ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್ ಸದಸ್ಯರಾಗಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ.ಜಯಕುಮಾರ್ ಅವರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.
ಲೋಕಸಭಾ ಚುನಾವಣೆ: ಶಸ್ತ್ರಾಸ್ತ್ರ ಠೇವಣಿಗೆ ಸಮಿತಿ ರಚನೆ
