ಮುಂಡಗೋಡ : ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ತಾಲೂಕಾ ಮಂಡಲದ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ – ಆರೋಗ್ಯ ಸೇವಾ ಚಟುವಟಿಕೆಗಳ ಭಾಗವಾಗಿಆಯೋಜಿಸಿದ್ದ ” ರಕ್ತ ದಾನ ಶಿಬಿರ ” ವನ್ನು ಬಿ.ಜೆ.ಪಿ ಮುಖಂಡ ಶ್ರೀ ವಿವೇಕ್ ಹೆಬ್ಬಾರ್ ಪಕ್ಷದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಭಾರತ ಮಾತೆಯ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕವಾಗಿ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ವಾಯುವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ವಿ.ಎಸ್.ಪಾಟೀಲ್, ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಯುವಮೋರ್ಚಾ ಅಧ್ಯಕ್ಷರಾದ ಗಣೇಶ ಶಿರಾಲಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂತೋಷ ತಳವಾರ ಹಾಗೂ ಸ್ಥಳೀಯ ಮುಖಂಡರಾದ ಕೆ.ಸಿ.ಗಲಬಿ, ಉಮೇಶ್ ಬಿಜಾಪುರ, ಸಂಜೀವ್ ಪೀಶೆ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು