Slide
Slide
Slide
previous arrow
next arrow

ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಆರೋಪಿಗಳ ಬಂಧನಕ್ಕೆ ಆಗ್ರಹ

300x250 AD

ದಾಂಡೇಲಿ : ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ನಾಸೀರ್ ಹುಸೇನ್ ಬೆಂಬಲಿಗರು ರಾಜ್ಯದ ಗರ್ಭಗುಡಿಯಾಗಿರುವ ವಿಧಾನ ಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶ ವಿರೋಧಿ ಕೃತ್ಯ. ದೇಶದ್ರೋಹಿ ಘೋಷಣೆ ಕೂಗಿದವರನ್ನು ಕೂಡಲೆ ಬಂಧಿಸಬೇಕೆಂದು ನಗರದ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷರಾದ ವಿಷ್ಣು ನಾಯರ್ ಆಗ್ರಹಿಸಿದ್ದಾರೆ.

ಅವರು ಬುಧವಾರ ನಗರದಲ್ಲಿ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಸಂಸದರಾದ ಅನಂತಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಅವರಿಗೆ ಏಕವಚನದಲ್ಲಿ ಮಾತನಾಡಿರುವುದಕ್ಕೆ ಸುಮೋಟೋ ಪ್ರಕರಣವನ್ನು ದಾಖಲಿಸಲಾಗುತ್ತದೆ. ಆದರೆ ಇದೇ ನಾಡಿನಲ್ಲಿ ಹುಟ್ಟಿ ವಿರೋಧಿ ರಾಷ್ಟ್ರದ ಪರ ಘೋಷಣೆಗಳನ್ನು ಕೂಗುವುದು ರಾಷ್ಟ್ರದ್ರೋಹದ ಕೆಲಸವಾಗಿದ್ದರೂ, ಅಂತವರ ಮೇಲೆ ಸುಮೋಟೋ ಪ್ರಕರಣವನ್ನು ದಾಖಲಿಸಲು ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಗುಡುಗಿದರು. ರಾಷ್ಟ್ರದ್ರೋಹಿ ಘೋಷಣೆಗಳನ್ನು ಕೂಗಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ವಿಷ್ಣು ನಾಯರ್ ಅವರು ಆಗ್ರಹಿಸಿದರು.

300x250 AD
Share This
300x250 AD
300x250 AD
300x250 AD
Back to top