Slide
Slide
Slide
previous arrow
next arrow

ತೋಟಗಾರಿಕೆ ತರಬೇತಿ; ರೈತರ ಮಕ್ಕಳಿಂದ ಅರ್ಜಿ ಆಹ್ವಾನ

300x250 AD

ಕಾರವಾರ: 2024-25 ಸಾಲಿನಲ್ಲಿ ದಿನಾಂಕ 02/05/2024 ರಿಂದ 28/02/2025 ರವರೆಗೆ ತೋಟಗಾರಿಕೆ ತರಬೇತಿ ಕೇಂದ್ರ, ಹೊಸೂರು, ಸಿದ್ದಾಪುರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಗೆ ಜಿಲ್ಲೆಯ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ತಂದೆ-ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಈ ಕುರಿತು ಕಂದಾಯ ಇಲಾಖೆಯಿಂದ ಧೃಢೀಕರಣ ಪತ್ರ ನೀಡಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳು 18 ರಿಂದ 33 ವರ್ಷದೊಳಗಿರಬೇಕು ಹಾಗೂ ಇತರೆ ಅಭ್ಯರ್ಥಿಗಳು 18 ರಿಂದ 30 ವರ್ಷದೊಳಗಿರಬೇಕು.
ಅರ್ಜಿ ನಮೂನೆಯನ್ನು ತೋಟಗಾರಿಕೆ ಉಪನಿರ್ದೇಶಕರ ಕಚೇರಿ (ಜಿ.ಪಂ.) ಶಿರಸಿ/ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.) ಕಾರವಾರ ರವರ ಕಚೇರಿಯಲ್ಲಿ ಅಥವಾ ಇಲಾಖೆ ವೆಬ್ ಸೈಟ್ https://horticulturedir.karnataka.gov.in ನಲ್ಲಿ ದಿನಾಂಕ: 01-03-2024 ರಿಂದ 30-03-2024 ವರೆಗೆ ಪಡೆಯಬಹುದಾಗಿದೆ.
ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ:01-04-2024 ರ ಸಂಜೆ 5.30 ಗಂಟೆಯೊಳಗೆ ತೋಟಗಾರಿಕೆ ಉಪನಿರ್ದೇಶಕರ ಕಚೇರಿ (ಜಿ.ಪಂ.) ಶಿರಸಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾ.ವ.) ಕಾರವಾರ, ರವರ ಕಚೇರಿಗೆ ಸಲ್ಲಿಸಬೇಕು. ಸಂದರ್ಶನವನ್ನು ದಿನಾಂಕ: 06-04-2024 ರಂದು ಬೆಳಗ್ಗೆ 11 ಗಂಟೆಗೆ ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಶಿರಸಿ ಯಲ್ಲಿ ಆಯೋಜಿಸಲಾಗಿದೆ. ಆಯ್ಕೆಪಟ್ಟಿಯನ್ನು ದಿನಾಂಕ:16-04-2024 ರಂದು ಪ್ರಕಟಿಸಲಾಗುವುದು. ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top