Slide
Slide
Slide
previous arrow
next arrow

ಯುವನಿಧಿ ; ಸ್ವಯಂ ಘೋಷಣೆ ಕಡ್ಡಾಯ

300x250 AD

ಕಾರವಾರ: ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ, ಪ್ರತಿ ಮಾಹೆಯಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ.

ಪ್ರಸಕ್ತ ಮಾಹೆಯಲ್ಲಿ ಫೆಬ್ರವರಿ 29 ರವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಯುವನಿಧಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುವುದಿಲ್ಲ. ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಜನವರಿ 2024 ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಸ್.ಎಂ.ಎಸ್. ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗಿರುತ್ತದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು, ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್‌ಸೈಟ್ ವೀಕ್ಷಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 1800 599 9918 ಗೆ ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top