ಕುಮಟಾ: 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಣೇಶ ಪಟಗಾರ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕರ್ನಾಟಕ ರಾಜ್ಯ ಜಾತಿ ಪಟ್ಟಿಯಲ್ಲಿ ನಮೂದಿತವಾದ ಹಿಂದುಳಿದ ವರ್ಗಗಳಿಗೆ ಸೇರಿರಬೇಕು.ಪ್ರವರ್ಗ-1 ಮತ್ತು ಎಸ್.ಸಿ. ಎಸ್.ಟಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಕ್ಕೆ ಮೀರಿರಬಾರದು.ಇತರ ಹಿಂದುಳಿದ ವರ್ಗಗಳಿಗೆ (ಪ್ರವರ್ಗ-2ಎ, 2ಬಿ, 3ಎ, 3ಬಿ) ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.1.00 ಲಕ್ಷ ಮೀರಿರಬಾರದು ಎಂದು ಕೆಲ ನಿಬಂಧನೆಗೊಳಪಡಿಸಿ ಪ್ರಕಟಣೆ ಹೊರಡಿಸಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 22 2021 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ದೇವರಾಜ ಅರಸು ಭವನ ಮೂರುರು ರಸ್ತೆ ಕುಮಟಾ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ :bcwd.hostels@karnataka.gov.in