ಶಿರಸಿ: ನಗರದಿಂದ ಸಿದ್ದಾಪುರ ತಾಲೂಕಿನ ಹಳ್ಳಿಗೆ ಅಕ್ರಮವಾಗಿ ಮದ್ಯ ಸಾಗಿಸುತ್ತಿರುವ ವೇಳೆ ಅಬಕಾರಿ ಇಲಾಖೆಯ ದಕ್ಷಿಣ ಕನ್ನಡ ವಿಭಾಗದ ಜಂಟಿ ಆಯುಕ್ತರ ಕಚೇರಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿ ದಿನೇಶ ವೈಕುಂಠ ಸಹಿತ ಮದ್ಯವನ್ನು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ. ಈತ ನಗರದಿಂದ ಸಿದ್ದಾಪುರ ತಾಲೂಕಿನ ಕಾನಸೂರಿಗೆ ಓಮಿನಿಯಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಅಗಸೆಬಾಗಿಲ ಬಳಿ ದಾಳಿ ನಡೆಸಿದ ಅಧಿಕಾರಿಗಳು, ಅಂದಾಜು 60 ಲೀಟರ್ ಭಾರತೀಯ ಮದ್ಯ ಹಾಗೂ 12 ಲೀಟರ್ ಬಿಯರ್ ವಶಕ್ಕೆ ಪಡೆದಿದ್ದಾರೆ.
ಆರೋಪಿ ಜತೆ ಓಮಿನಿ ವಾಹನ ಸೇರಿ ಒಟ್ಟು 1,77,625 ರೂ. ಮದ್ಯವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಿದ್ದಾರೆ. ಅಬಕಾರಿ ಅಧೀಕ್ಷಕ ವಿನೋದ್ ಕುಮಾರ್ ಮಾರ್ಗದರ್ಶನದಲ್ಲಿ ಜೆಸಿ ಸ್ಕ್ಯಾಡ ಅಧಿಕಾರಿ ಸಿದ್ದಪ್ಪ ಮೇಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ಅಕ್ರಮ ಮದ್ಯ ಸಾಗಾಟ ವ್ಯಕ್ತಿ ಬಂಧನ
