Slide
Slide
Slide
previous arrow
next arrow

ಖಾಸಗಿ ಸಂಸ್ಥೆಗಳ FSL ವರದಿಗೆ ಸರ್ಕಾರ ಮಾನ್ಯತೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

300x250 AD

ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ

ಶಿರಸಿ: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 

ಅವರು ಇಂದು ಬುಧವಾರ ನಗರದಲ್ಲಿ, ಬಿಜೆಪಿ ಖಾಸಗಿ ಸಂಸ್ಥೆಯೊಂದರ FSL ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯು ಅಧಿಕೃತ ಎಂದರು.

300x250 AD

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಚಿತ ಸಹಾಯವಾಣಿ ಆರಂಭಿಸಲಾಗುವುದು. ಸಚಿವರು ಮತ್ತು ಶಾಸಕರ ಅಧ್ಯಕ್ಷತೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್  ಸಭೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.  ಪ್ರತೀ ವಾರಕ್ಕೊಮ್ಮೆ ಪಿಡಿಒಗಳು ಮತ್ತು ವಿಎಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ. ಈ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಡಿಸಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Share This
300x250 AD
300x250 AD
300x250 AD
Back to top