Slide
Slide
Slide
previous arrow
next arrow

ಸಂಸದ ಹೆಗಡೆ ಸಹಿತ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲು

300x250 AD

ಭಟ್ಕಳ : ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯಿತಿಯ ತೆಂಗಿನಗುಂಡಿ ಬೀಚ್ ಬಳಿ ಅನುಮತಿ ಇಲ್ಲದೆ ಸೋಮವಾರ ಹನುಮಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಅನಂತಕುಮಾರ ಹೆಗಡೆ ಸೇರಿದಂತೆ 20ಕ್ಕೂ ಹೆಚ್ಚು ಜನರ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಂಸದ ಹೆಗಡೆ ಸೇರಿದಂತೆ ಬಿಜೆಪಿ ಮುಖಂಡರಾದ ಗೋವಿಂದ ನಾಯ್ಕ, ಸುಬ್ರಾಯ ದೇವಾಡಿಗ, ಶ್ರೀಕಾಂತ ನಾಯ್ಕ, ದೀಪಕ ನಾಯ್ಕ, ಸುರೇಶ ಕೋಣೆಮನೆ, ರವಿ ನಾಯ್ಕ ಜಾಲಿ ಸೇರಿ ಇತರ 15ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ನಿಯಮ ಉಲ್ಲಂಘಿಸಿ ಧ್ವಜ ಹಾರಿಸಿರುವುದು, ಗಲಭೆಗೆ ಪ್ರಚೋದನೆ ನೀಡಲು ಯತ್ನಿಸುವ ಜತೆಗೆ ಧಾರ್ಮಿಕ ಭಾವನೆಗೆ ಧಕ್ಕೆ ತರಲು ಯತ್ನಿಸಿದ ಕಾರಣಕ್ಕೆ ಐಪಿಸಿ ಸೆಕ್ಷನ್ 143, 147, 149, 1532 800 ಪ್ರಕರಣ ದಾಖಲಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top