Slide
Slide
Slide
previous arrow
next arrow

ದಾಂಡೇಲಿಯಲ್ಲಿ 3362 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ: ಡಾ.ಅನಿಲ್ ಕುಮಾರ್‌

300x250 AD

ದಾಂಡೇಲಿ : ತಾಲೂಕಿನಲ್ಲಿ ಒಟ್ಟು 3362 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡಲಾಗಿದ್ದು ಶೇ: 97ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್‌ ನಾಯ್ಕ ತಿಳಿಸಿದ್ದಾರೆ.

ಅವರು ಬುಧವಾರ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡುತ್ತಾ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು.
ಮಾರ್ಚ್ 3ರಿಂದ ಮಾರ್ಚ್ 06 ರವರೆಗೆ ನಡೆದ ಈ ಅಭಿಯಾನದಲ್ಲಿ ಒಟ್ಟು 3,362 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ನೀಡಲಾಗಿದೆ. ಈ ಅಭಿಯಾನದ ಯಶಸ್ಸಿಗೆ ತಾಲೂಕು ಆರೋಗ್ಯ ಇಲಾಖೆಯ ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಶ್ರಮಿಸಿದ್ದಾರೆ ಎಂದರು.

300x250 AD
Share This
300x250 AD
300x250 AD
300x250 AD
Back to top