Slide
Slide
Slide
previous arrow
next arrow

ಮುರುಡೇಶ್ವರಲ್ಲಿ ಶಿವರಾತ್ರಿ ಜಾಗರಣೆಯ ಭಕ್ತಿ ವೈಭವ

300x250 AD

ಕಾರವಾರ: ಮಾರ್ಚ್ 8 ರಂದು ಮಹಾಶಿವರಾತ್ರಿಯ ಪ್ರಯುಕ್ತ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಮೂಲಕ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮದಲ್ಲಿ ಭಕ್ತಿ ವೈಭವದಿಂದ ಕೂಡಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಮಾರ್ಚ್ 8, ಸಂಜೆ 6 ರಿಂದ ಮಾರ್ಚ್ 9, ಬೆಳಗ್ಗೆ 6 ರವರೆಗೆ ಅಹೋರಾತ್ರಿ ಶಿವನಾಮ ಸ್ಮರಣೆಯ ವೈವಿಧ್ಯಮಯ ಭಕ್ತಿಮಯದಿಂದ ಕೂಡಿರುವ ಕಾರ್ಯಕ್ರಮಗಳು ನಡೆಯಲಿದ್ದು, ಸುಮಾರು 1500 ಕ್ಕೂ ಹೆಚ್ಚು ಭಕ್ತಾಧಿಗಳು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಲ್ಲಿದ್ದು , ಕಾರ್ಯಕ್ರಮದ ಸ್ಥಳದಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಕಾರ್ಯಕ್ರಮದಲ್ಲಿ ಸೋಜುಗಾದ ಸೂಜು ಮಲ್ಲಿಗೆ ಹಾಡಿನ ಖ್ಯಾತಿಯ ಅನನ್ಯಾ ಭಟ್ ಅವರಿಂದ ಸಂಗೀತ ಕಾರ್ಯಕ್ರಮ, ಶಿವಭಕ್ತಿ ಸಾರುವ 3ಡಿ ಮ್ಯಾಪಿಂಗ್ ಮತ್ತು ಲೇಸರ್ ಶೋ, ಸರಿಗಮ ಖ್ಯಾತಿಯ ಅಶ್ವಿನ್ ಶರ್ಮಾ ಮತ್ತು ತಂಡದಿಂದ ಗಾಯನ ಕಾರ್ಯಕ್ರಮ, ವಿದೂಷಿ ವೀಣಾ ವಾರುಣಿ ಅವರಿಂದ ಪಂಚ ವೀಣಾ ವಾದನ, ಡ್ರಾಮಾ ಜೂನಿಯರ್ ತಂಡದಿಂದ ಕಾರ್ಯಕ್ರಮ, ಮಗಳು ಜಾನಕಿ ಖ್ಯಾತಿಯ ಗಾನವಿ ಲಕ್ಷಣ್ ಅವರಿಂದ ನೃತ್ಯ ಪ್ರದರ್ಶನ, ಬಿಗ್‌ಬಾಸ್ ಖ್ಯಾತಿಯ ಕಾರ್ತಿಕ್ ಅವರಿಂದ ಪ್ರದರ್ಶನ, ಸ್ಥಳೀಯ ಪ್ರತಿಭಾನ್ವಿತ ಕಲಾವಿದರಿಂದ ಆಕರ್ಷಕ ವೈವಿಧ್ಯಮಯ ಕಾರ್ಯಕ್ರಮಗಳು ಸೇರಿದಂತೆ ಮನೋರಂಜನೆ, ಧ್ಯಾನ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಜಾಗರಣೆ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಭಟ್ಕಳಕ್ಕೆ ಆಗಮಿಸಲು ಮತ್ತು ಬೆಳಗ್ಗೆ ಬೇಗ ತೆರಳಲು ಅನುಕೂಲವಾಗುವಂತೆ ಹೆಚ್ಚುವರಿ ಸಾರಿಗೆ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.
ಜಿಲ್ಲೆಯ ಹಾಗೂ ರಾಜ್ಯದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಶಿವರಾತ್ರಿ ಜಾಗರಣೆಯನ್ನು ಶ್ರದ್ದಾ ಭಕ್ತಿಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top