Slide
Slide
Slide
previous arrow
next arrow

ಬರಗಾಲ ಮುನ್ಸೂಚನೆ; ಜಾನುವಾರು ಮೇವು ಬಿಕ್ಕಟ್ಟಿನ ಬಗ್ಗೆ ಕಳವಳ

300x250 AD

ಕಾರವಾರ: ನೈಋತ್ಯ ಮಾನ್ಸೂನ್ ವೈಫಲ್ಯದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ, ಹೊನ್ನಾವರ ತಾಲ್ಲೂಕು ಹೊರತುಪಡಿಸಿ ಉಳಿದ 11 ತಾಲೂಕುಗಳನ್ನು ರಾಜ್ಯ ಸರ್ಕಾರವು ಬರಗಾಲದ ತಾಲ್ಲೂಕುಗಳಾಗಿ ಘೋಷಿಸಿದ್ದು, ಈ ಪ್ರದೇಶದಲ್ಲಿ ಸಂಭಾವ್ಯ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಈ ಸಂದಿಗ್ಧ ಪರಿಸ್ಥಿತಿಗೆ ಸ್ಪಂದಿಸಿ ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕುಂದುಕೊರತೆಗಳನ್ನು ಪರಿಹರಿಸಲು ಮತ್ತು ಸಂತ್ರಸ್ತ ನಿವಾಸಿಗಳಿಗೆ ಅಗತ್ಯ ನೆರವು ನೀಡಲು 24*7 ನಿಯಂತ್ರಣ ಕೊಠಡಿಯನ್ನು ಸಕ್ರಿಯಗೊಳಿಸಲಾಗಿದ್ದು, ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ (UKDEOC) ಈಗ ಕಾರ್ಯನಿರ್ವಹಿಸುತ್ತಿದೆ.

ಬಾಧಿತ ವ್ಯಕ್ತಿಗಳು ತಕ್ಷಣದ ಸಹಾಯಕ್ಕಾಗಿ ಉತ್ತರ ಕನ್ನಡ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು (UKDEOC) ಈ ಟೋಲ್-ಫ್ರೀ ಸಹಾಯವಾಣಿ: 1077 • WhatsApp: Tel:+919483511015 ಮೂಲಕ ಸಂಪರ್ಕಿಸಲು ಕೋರಲಾಗಿದೆ

300x250 AD

ಬರಗಾಲದಿಂದ ಆಗಿರುವ ತೊಂದರೆಗಳನ್ನು ನಿವಾರಿಸಲು ಎಲ್ಲ ಪೂರ್ವತಯಾರಿಯನ್ನು ಜಿಲ್ಲಾಡಳಿತ ಮಾಡಲಾಗಿದ್ದು . ಈ ಬಿಕ್ಕಟ್ಟಿನ ಪರಿಣಾಮವನ್ನು ತಗ್ಗಿಸುವಲ್ಲಿ ಸಮುದಾಯದಿಂದ ತ್ವರಿತ ಕ್ರಮ ಮತ್ತು ಸಹಕಾರ ಜಿಲ್ಲಾಡಳಿತಕ್ಕೆ ಅತ್ಯಗತ್ಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top