ಶಿರಸಿ: ಮಹಾಶಿವರಾತ್ರಿ ಪ್ರಯುಕ್ತ ತಾಲೂಕಿನ ಶಿರ್ಲಬೈಲ್‌ನ ಮುರೇಗಾರ ಫಾಲ್ಸ್‌ನಲ್ಲಿ ಪಾಂಡವರಕಾಲದ ಇತಿಹಾಸ ಇರುವ ಹೊಳೆಯ ಮಧ್ಯದಲ್ಲಿರುವ ವಿಶೇಷ ಶಿವಲಿಂಗಕ್ಕೆ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಾಂಡವರು ವನವಾಸದ ಸಮಯದಲ್ಲಿ ಈ ಶಿವಲಿಂಗಕ್ಕೆ ಪೂಜೆ ಸಲ್ಲಿಸುತ್ತಿದ್ದರು ಎಂದು ಪ್ರತೀತಿ ಇದೆ. ಕಳೆದ ಹಲವಾರು ವರ್ಷಗಳಿಂದ ಪ್ರತಿವರ್ಷವೂ ಶಿವರಾತ್ರಿಯಂದು ಇಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಊರಿನ 1000 ಕ್ಕೂ ಹೆಚ್ಚು ಜನ ಆಗಮಿಸಿದ್ದರು. ಶಿರ್ಲೆಬೈಲ, ಮಣದೂರ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಶಿವಲಿಂಗದ ಪೂಜೆಗೆ ಸಕಲ ವ್ಯವಸ್ಥೆ ಮಾಡಿದ್ದರು. ಗ್ರಾಮಸ್ಥರು, ಸಾರ್ವಜನಿಕರು, ಶಿವಭಕ್ತರು ಪೂಜೆ ಸಲ್ಲಿಸಿ ಹಣ್ಣುಕಾಯಿ ಸೇವೆ ಸಮರ್ಪಿಸಿದರು.