ದಾಂಡೇಲಿ : ಜೋಯಿಡಾ ತಾಲೂಕಿನ ಗಡಿಭಾಗದ ಗ್ರಾಮಗಳಿಗೆ ಅಗತ್ಯ ಬೇಕಾದ ರಸ್ತೆ, ಸಾರಿಗೆ ಬಸ್, ಸೇತುವೆ ಮೊದಲಾದ ಮೂಲಸೌಕರ್ಯಗಳನ್ನು ಒದಗಿಸಲು ತ್ವರಿತ ಗತಿಯಲ್ಲಿ ಕ್ರಮವನ್ನು ಕೈಗೊಳ್ಳಬೇಕೆಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯಮುನಾ ಗಾಂವಕರ್ ಆಗ್ರಹಿಸಿದ್ದಾರೆ.
ಅವರು ಈ ಬಗ್ಗೆ ಶನಿವಾರ ದಾಂಡೇಲಿಯಲ್ಲಿ ಮಾಧ್ಯಮದ ಮೂಲಕ ಜೋಯಿಡಾ ತಾಲೂಕಿನ ಗಡಿ ಭಾಗದ ಗ್ರಾಮಗಳಿಗೆ ಜನರ ಬದುಕಿಗೆ ಅತಿ ಅವಶ್ಯಕವಾಗಿ ಬೇಕಾಗಿರುವ ರಸ್ತೆ, ಸೇತುವೆ, ಸಾರಿಗೆ ಬಸ್ ವ್ಯವಸ್ಥೆಯನ್ನು ಒದಗಿಸಲು ಸರಕಾರ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಗಮನಸೆಳೆಯುವ ನಿಟ್ಟಿನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪಾದಯಾತ್ರೆಯ ಮೂಲಕ ಹೋರಾಟವನ್ನು ಮಾಡಲಾಗಿತ್ತು. ರಾಜ್ಯ ಮತ್ತು ಕೇಂದ್ರ ಸರ್ಕಾರ ಜೋಯಿಡಾ ತಾಲೂಕಿನ ಗಡಿಭಾಗದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆಯಡಿ ಕೆಲಸವನ್ನು ನಿರ್ವಹಿಸಬೇಕೆಂದು ಯಮುನಾ ಗಾಂವಕರ್ ಆಗ್ರಹಿಸಿದರು.