Slide
Slide
Slide
previous arrow
next arrow

ಲೋಕಸಭಾ ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಡಿಸಿ ಸೂಚನೆ

300x250 AD

ಕುಮಟಾ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು.

ಅವರು ಕುಮಟಾ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಯ ಮಠಗಟ್ಟೆಗಳಲ್ಲಿ ಎಲ್ಲಾ ಅಗತ್ಯ ಮೂಲ ಸೌಕರ್ಯ ಇರುವ ಬಗ್ಗೆ ಪರಿಶೀಲಿಸಿ ದೃಢೀಕರಣ ನೀಡಬೇಕು ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗೆ ಸೂಕ್ತ ತರಬೇತಿ ಕಾರ್ಯಕ್ರಮಗಳನ್ನು  ಆಯೋಜಿಸಬೇಕು ಎಂದರು.

 ತಮ್ಮ ವ್ಯಾಪ್ತಿಯಲ್ಲಿನ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಮಾಹಿತಿ ಸಲ್ಲಿಸಿ ಅಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು‌. 85 ವರ್ಷ ಮೇಲ್ಪಟ್ಟ ಮತದಾರರು ಮತ್ತು ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಮತಪತ್ರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

300x250 AD

ಸಹಾಯಕ ಚುನಾವಣಾಧಿಕಾರಿಗಳು ಮತ್ತು ತಹಶೀಲ್ದಾರರು  C-Vigil, Encore, ಮಾದರಿ ನೀತಿ ಸಂಹಿತೆ ತಂಡ, ದೂರು ಮಾಹಿತಿ ಸಂಗ್ರಹ ತಂಡ, ಸುವಿಧಾ ವೆಬ್ ಪೋರ್ಟಲ್ ನಲ್ಲಿ ನೋಡಿಕೊಳ್ಳಲು, ವಾಹನಗಳಿಗೆ ಅನುಮತಿ, ರಾಜಕೀಯ/ಸಾಂಸ್ಕೃತಿಕ/ಧಾರ್ಮಿಕ/ಸಾಮಾಜಿಕ ಕಾರ್ಯಕ್ರಮ ಗಳಿಗೆ  ಅನುಮತಿ ನೀಡುವ ಸಲುವಾಗಿ ಸಿಬ್ಬಂದಿಗಳ ತಂಡ ರಚಿಸಿ ದೂರುಗಳು ಬಾರದಂತೆ ಕಾರ್ಯ ನಿರ್ವಹಿಸಬೇಕು ಎಂದರು. ಸೂಕ್ತ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಚೆಕ್ ಪೋಸ್ಟ್‌ಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಹಾಗೂ ಅಲ್ಲಿನ ಸಿಬ್ಬಂದಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿಗಳಾದ  ಕನಿಷ್ಕ, ಅಪರ್ಣಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು. ಸಭೆಯ ನಂತರ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು,  ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share This
300x250 AD
300x250 AD
300x250 AD
Back to top