Slide
Slide
Slide
previous arrow
next arrow

ಯುವತಿ ಕಾಣೆ: ಮಾಹಿತಿ ಸಿಕ್ಕಲ್ಲಿ ತಿಳಿಸಿ

300x250 AD

ಯಲ್ಲಾಪುರ: ತಾಲೂಕಿನ ಚಂದಗುಳಿ, ದೇಸಾಯಿಮನೆಯ 26ವರ್ಷದ ತೇಜಾ ಇವರು ದಿನಾಂಕ: 20-12-2023 ರಂದು ಬೆಳಿಗ್ಗೆ 9.30 ಗಂಟೆಗೆ ತಾನು ಕೆಲಸ ಮಾಡುತ್ತಿದ್ದ ಹುಬ್ಬಳ್ಳಿ ಕಂಪನಿಗೆ ಹೋಗುವುದಾಗಿ ಯಲ್ಲಾಪುರ ಬಸ್ ನಿಲ್ದಾಣದಿಂದ ಹೋದವಳು, ಕೆಲಸ ಮಾಡುತ್ತಿದ್ದ ಸ್ಥಳಕ್ಕೂ ಹೋಗದೇ ಮನೆಗೂ ಬಾರದೇ ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿದ್ದಾಳೆ.

ಕಾಣೆಯಾದ ಮಹಿಳೆಯ ಚಹರೆ: ದುಂಡನೆಯ ಮುಖ, ಕಪ್ಪು ಕೂದಲು, ಗೋಧಿ ಮೈ ಬಣ್ಣ, 5.2 ಅಡಿ ಎತ್ತರ, ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾಳೆ. ಹಳದಿ ಬಣ್ಣದ ಚೂಡಿದಾರ ಧರಿಸಿದ್ದಾಳೆ. ಇವರು ಸಾರ್ವಜನಿಕರಿಗೆ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆTel:+9108419261133, ಯಲ್ಲಾಪುರ ಪೊಲೀಸ್ ನಿರೀಕ್ಷಕರ ದೂ. ಸಂ:Tel:+919480805757 ಹಾಗೂ ಪಿ.ಎಸ್.ಐ ದೂ.ಸಂ:Tel:+919480805273 ನ್ನು ಸಂಪರ್ಕಿಸುವಂತೆ ಯಲ್ಲಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top