ಶಿರಸಿ: ಶಿರಸಿ ಉಪವಿಭಾಗದ ಗ್ರಾಮೀಣ-1 ಶಾಖಾ ವ್ಯಾಪ್ತಿಯಲ್ಲಿ ಮಾರ್ಗ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.13, ಬುಧವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಶಿರಸಿ 220/11 ಕೆ.ವಿ ಎಸಳೆ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬಂಕನಾಳ ವಿದ್ಯುತ್ ಮಾರ್ಗದ ಬಂಕನಾಳ ಹಾಗೂ ದೊಡ್ನಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.