Slide
Slide
Slide
previous arrow
next arrow

ಮುಂಡಗೋಡ ನೂತನ ಬಸ್ ಡಿಪೋ ಉದ್ಘಾಟಿಸಿದ ಸಚಿವ ರಾಮಲಿಂಗಾರೆಡ್ಡಿ

300x250 AD

ಮುಂಡಗೋಡ: ತಾಲೂಕಿನಲ್ಲಿ ನೂತನ ಬಸ್ ಡಿಪೋ ನಿರ್ಮಾಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಬಿಡಲಾಗುವುದು. ಇದರಿಂದ ಸರಿಯಾದ ವೇಳೆಗೆ ಪಟ್ಟಣಕ್ಕೆ ಆಗಮಿಸಿ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸೋಮವಾರ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿ ರೂ.4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಬಸ್ ಘಟಕವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಬಸ್ ಘಟಕ ನಿರ್ಮಾಣ ಮಾಡಬೇಕೆಂಬುವುದು ಶಾಸಕ ಹೆಬ್ಬಾರ್ ಅವರ ಕನಸಾಗಿತ್ತು. ಹಲವು ವರ್ಷಗಳ ಪ್ರಯತ್ನದಿಂದ ಇಂದು ತಾಲೂಕಿನಲ್ಲಿ ಸುಸಜ್ಜಿತ ಬಸ್ ಘಟಕ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮೀಣ ಭಾಗದ ಸಾರಿಗೆ ಸೌಲಭ್ಯ ವಂಚಿತ ಗ್ರಾಮಗಳಿಗೂ ಸಾರಿಗೆ ವ್ಯವಸ್ಥೆ ಒದಗಿಸಲಾಗುವುದು ಹೇಳಿದರು.

ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ಈ ಹಿಂದೆ ತಾಲೂಕಿನಲ್ಲಿ ಬಸ್ ಡಿಪೋ ಇಲ್ಲದ ಕಾರಣ ಸರಿಯಾದ ಸಮಯಕ್ಕೆ ಬಸ್ ಬರದೆ ಪ್ರತಿವರ್ಷವು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರು . ವಿಶೇಷವಾಗಿ ಹೆಣ್ಣುಮಕ್ಕಳು ಶಿಕ್ಷಣಕ್ಕಾಗಿ ಪಟ್ಟಣಕ್ಕೆ ಬಂದು ಹೋಗುವುದು ಕಷ್ಟಪಡುತ್ತಿದ್ದರು. ಆದರೆ ಈಗ ತಾಲೂಕಿನಲ್ಲಿಯೇ ಸುಸಜ್ಜಿತ ಬಸ್ ಡಿಪೋ ನಿರ್ಮಾಣವಾಗಿದೆ. ಇದರಿಂದ ಪ್ರತಿಯೊಬ್ಬ ಹೆಣ್ಣುಮಕ್ಕಳು ಪಟ್ಟಣಕ್ಕೆ ಸರಿಯಾದ ಸಮಯಕ್ಕೆ ಬಂದು ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದರು.

300x250 AD

ಮಾಜಿ ಶಾಸಕ ವಿ.ಎಸ್.ಪಾಟೀಲ ಮಾತನಾಡಿ, ಸರಕಾರದ ಶಕ್ತಿ ಯೋಜನೆಯು ಒಳ್ಳೆಯ ಯೋಜನೆಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸರಕಾರಿ ಬಸ್‌ನಲ್ಲಿ ಪ್ರಯಾಣಿಸುವ ಮೂಲಕ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬೇಕು. ಸಾರಿಗೆ ಸಂಸ್ಥೆಯು ನಮ್ಮ ಸಂಸ್ಥೆ ಎನ್ನವು ಭಾವನೆ ಎಲ್ಲರಲ್ಲೂ ಮೊದಲು ಬರಬೇಕು ಎಂದು ಹೇಳಿದರು. ಈ ವೇಳೆ ಮಾಜಿ ಜಿ.ಪಂ. ಸದಸ್ಯ ಎಲ್.ಟಿ. ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಬ್ಲಾಕ್ ಅಧ್ಯಕ್ಷ ಜ್ಞಾನೇಶ್ವರ ಗುಡಿಯಾಳ, ಪ್ರಮುಖರಾದ ಕೃಷ್ಣ ಹಿರೇಹಳ್ಳಿ, ಗುಡ್ಡಪ್ಪ ಕಾತೂರ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top