Slide
Slide
Slide
previous arrow
next arrow

ಅಮರೇಶ್ ರಾಠೋಡ್‌ಗೆ ‘ಪಿಡಿಒ ಆಫ್ ದಿ ಮಂತ್’ ಪ್ರಶಸ್ತಿ

300x250 AD

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಫೆಬ್ರುವರಿ ತಿಂಗಳಲ್ಲಿ ಜೋಯಿಡಾ ತಾಲ್ಲೂಕಿನ ರಾಮನಗರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮರೇಶ್ ರಾಠೋಡ ಅವರು ಭಾಜನರಾಗಿದ್ದಾರೆ.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಪಿಡಿಒ ಅಮರೇಶ್ ಅವರಿಗೆ ಅಭಿನಂದನಾ ಪತ್ರ ಪ್ರದಾನ ಮಾಡಿದರು.

300x250 AD

ಈ ಸಂದರ್ಭದಲ್ಲಿ ಶಾಸಕರು ಹಾಗೂ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಸೈಲ್, ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಪಂಚಾಯತನ ಎಲ್ಲ ಶಾಖೆಗಳ ಮುಖ್ಯಸ್ಥರು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top