Slide
Slide
Slide
previous arrow
next arrow

ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

300x250 AD

ಕಾರವಾರ: ಹೊನ್ನಾವರ ತಾಲೂಕಿನ ಕಡತೋಕ, ಸಿದ್ದಾಪುರ ತಾಲೂಕಿನ ಕ್ಯಾದಗಿ, ಶಿರಸಿ ತಾಲೂಕಿನ ದಾಸನಕೊಪ್ಪ, ಜೋಯಿಡಾ ತಾಲೂಕಿನ ಕುಂಬಾರವಾಡ, ಹಳಿಯಾಳ ತಾಲೂಕಿನ ತೇರಗಾಂವ ಪ್ರಾಥಮಿಕ ಕೇಂದ್ರಗಳಲ್ಲಿ ಖಾಲಿ ಇರುವ (5) ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿಗಳ ಮೂಲಕ ಭರ್ತಿ ಮಾಡುವವರೆಗೆ ಅಥವಾ ವರ್ಗಾವಣೆ ಮೂಲಕ ಖಾಯಂ ವೈದ್ಯರು ಸ್ಥಳ ನಿಯುಕ್ತಿಗೊಳ್ಳುವವರೆಗೆ, ಗುತ್ತಿಗೆ ಆಧಾರದಲ್ಲಿ ನೇರ ಸಂದರ್ಶನ (Walk-in-Interview) ಮುಖಾಂತರ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಎಂಬಿಬಿಎಸ್ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳ ಕಚೇರಿ ವೇಳೆಯಲ್ಲಿ ಮೂಲ ದಾಖಲೆಗಳೊಂದಿಗೆ ನೇರ ಸಂದರ್ಶನ (Walk-in-Interview) ಹಾಜರಾಗುವುದು ಹಾಗೂ ಅಭ್ಯರ್ಥಿಗಳ ಮೂಲ ದಾಖಲಾತಿಗಳನ್ನು ಅದೇ ದಿನ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕಾರವಾರ ದೂರವಾಣಿ ಸಂಖ್ಯೆ Tel:+9108382226339 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top